ಮೂಡುಬಿದಿರೆ: ಕಳೆದ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರು ನಿವಾಸಿ ಪ್ರಕಾಶ್ ಅವರ ಮನೆಯ ಬಳಿ ಇರುವ ಕೊಟ್ಟಿಗೆಯಲ್ಲಿ 5 ದನಗಳು ಕೊಚ್ಚಿಕೊಂಡು ಹೋಗಿವೆ. ಈ ದುರ್ಘಟನೆಯಲ್ಲಿ 1 ದನ ದುರ್ಮರಣ ಹೊಂದಿದೆ.
2 ದನಗಳು ವಾಪಸು ಬಂದು, ಉಳಿದ 2 ದನಗಳು ಇನ್ನೂ ಕಾಣೆಯಾಗಿವೆ. ಘಟನಾ ಸ್ಥಳಕ್ಕೆ ತಕ್ಷಣ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಬಿ., ಸಹಾಯಕ ನಿರ್ದೇಶಕರು (ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲಾ, ಸದಸ್ಯರು, ಗ್ರಾಮ ಕರಣಿಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Leave a Reply