ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಾಳೆ ಗುರುವಾರ (ಆಗಸ್ಟ್ 1) ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ (ಪಿಯು) ನಾಳೆ ಆಗಸ್ಟ್ 1ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಈ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಸಮುದಾಯದ ಸುರಕ್ಷತೆಯನ್ನು ದೃಷ್ಟಿಯಲ್ಲಿ, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ADVRTISEMENT

Leave a Reply

Your email address will not be published. Required fields are marked *