ಮೂಡುಬಿದಿರೆಯಲ್ಲಿ ಮಂಗಳವಾರ ನಡೆದ 38ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಅವರಿಗೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಶ್ರೀ ಕೃಷ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಭಯಚಂದ್ರರ ರಾಜಕೀಯ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರದ ಸೇವೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಉದ್ಯಮಿ ಶ್ರೀಪತಿ ಭಟ್, ಪುರಸಭಾಧ್ಯಕ್ಷೆ ಜಯಶ್ರೀ, ಮುಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಬಿಜೆಪಿ ಮುಖಂಡ ಸುದರ್ಶನ ಎಂ, ಉದ್ಯಮಿ ಪ್ರಭಾಚಂದ್ರ ಜೈನ್, ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ಸುಶಾಂತ್ ಕರ್ಕೇರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಉತ್ಸವವು ಸಹಕಾರ, ಸಮರ್ಪಣೆ ಮತ್ತು ಸಮುದಾಯದ ಹಿತದೃಷ್ಟಿಯಿಂದ ಆಯೋಜಿಸಲ್ಪಟ್ಟಿದ್ದು, ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
Leave a Reply