ಮೂಡುಬಿದಿರೆ: ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆಯು ಶುಕ್ರವಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆಯ ಕುರಿತು ಮಾತನಾಡಿದ ಮೂಡುಬಿದಿರೆ ಹಾಗೂ ಕಲ್ಲಮುಂಡ್ಕೂರು ವಲಯದ ಐ.ಸಿ.ಡಿ.ಎಸ್‌ನ ಮೇಲ್ವಿಚಾರಕಿ ಶುಭ, ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿದಿನ ಹೆಣ್ಣು ಮಕ್ಕಳ ದಿನವನ್ನು ಆಚರಿಸುವಂತಾಗಬೇಕೆAದ ಅವರು ಹೆಣ್ಣು ಮಕ್ಕಳು ಇಂದು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಓದುವಿನಲ್ಲೂ, ಆಟೋಟ ಸ್ಪರ್ಧೆಗಳಲ್ಲೂ ಮುಂದೆ ಇದ್ದಾರೆ. ಆದರೂ ಇಂದು ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳ ಸಂಖ್ಯೆ ತೀರಾ ಕುಸಿದಿದೆ. ಇದಕ್ಕೆ ಮೂಲ ಕಾರಣ ಹೆಣ್ಣು ಭ್ರೂಣ ಹತ್ಯೆ. ಆದರೆ ಇದೀಗ ಭ್ರೂಣ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಎಲ್ಲೂ ಭ್ರೂಣಲಿಂಗ ಪತ್ತೆ ಮಾಡುವುದಿಲ್ಲ. ಹೆಣ್ಣು ಮಗುವಿಗೂ ಕೂಡ ಗಂಡು ಮಗುವಿನಷ್ಟೇ ಪ್ರಾಮುಖ್ಯತೆಯನ್ನು ನೀಡಬೇಕು ಎಂದರು.
ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಅಕ್ಷತಾ ನಾಯಕ್ ಮಾತನಾಡಿ, ಮಕ್ಕಳಲ್ಲಿ ಹೆಣ್ಣಾಗಲಿ, ಗಂಡಾಗಲೀ ಆರೋಗ್ಯವಂತ ಶಿಶುವಿರಲಿ. ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಹೇಗೆ ಬುದ್ದಿ ಹೇಳುತ್ತೇವೆಯೋ ಹಾಗೇ ಗಂಡು ಮಕ್ಕಳಿಗೂ ಮನೆಯ ಅಥವಾ ಅಕ್ಕ-ಪಕ್ಕದ ಮನೆಯ ಹೆಣ್ಣು ಮಕ್ಕಳನ್ನು ಗೌರವಯುತವಾಗಿ ಕಾಣುವಂತೆ ಬುದ್ಧಿ ಮಾತು ಹೇಳಬೇಕು. ಎಂದು ಮಕ್ಕಳ ಪೋಷಕರಿಗೆ ಕಿವಿ ಮಾತು ಹೇಳಿದರು.
ಹಿರಿಯ ಪ್ರಾಥಮಿಕ ಆರೋಗ್ಯಾಧಿಕಾರಿ ಶಾಂತಮ್ಮ ಹೆಣ್ಣು ಮಕ್ಕಳ ಮುಟ್ಟಿನ ಬಗ್ಗೆ, ಶುಚಿತ್ವದ ಕುರಿತು ಮಾರ್ಗದರ್ಶನ ನೀಡಿದರು.

Leave a Reply