Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ , ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರೂ ಆದಂತಹ ಶ್ರೀ ಸಾ.ರಾ ಗೋವಿಂದರವರು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಸುಂದರ್ ರಾಜ್, ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷರಾದ ಬಿ.ಎನ್ ಜಗದೀಶ್, ಅಂಬೇಡ್ಕರ್ ಸೇನೆಯ ಅಧ್ಯಕ್ಷರಾದ ಪಿ. ಮೂರ್ತಿ, ಕನ್ನಡವೇ ಸತ್ಯ ರಂಗಣ್ಣ, ನಿರ್ಮಾಪಕರಾದ ಕಿರಣ್ ತೋಟಂಬೈಲು, ಚೇತನ್ ರಾಜ್, ಹಿರಿಯ ನಟರಾದ ಶಂಕರ್ ಭಟ್, ಪ್ರಣಯ ಮೂರ್ತಿ, ಹಿರಿಯ ಸಾಹಿತಿಗಳಾದ ಬೆ.ಗೋ ರಮೇಶ್, ಕಲಾಭೂಮಿ ಪ್ರತಿಷ್ಠಾನದ ಅಧ್ಯಕ್ಷರಾದ ಆಸ್ಕರ್ ಕೃಷ್ಣ, ಸಂಚಾಲಕರಾದ ನಿಂಗರಾಜ್ ಮತ್ತು ರಕ್ತದಾನಿ ಮಂಜು ಗಣ್ಯರ ಸಮ್ಮುಖದಲ್ಲಿ ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ADVRTISEMENT



Leave a Reply