ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 61ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ನಾಳೆ ನಡೆಯಲಿರುವ ಶೋಭಾಯಾತ್ರೆ ವೇಳೆ ವಾಹನ ಸಂಚಾರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ತಿಳಿಸಿದ್ದಾರೆ.
ಮಧ್ಯಾಹ್ನ 12 ಗಂಟೆಯ ನಂತರ ಸಾರ್ವಜನಿಕರು ತಮ್ಮ ವಾಹನಗಳನ್ನು ನಗರಕ್ಕೆ ತರದೆ, ಮೂಡುಬಿದಿರೆಯ ಹೊರವರ್ತುಲ (ಬೈಪಾಸ್ ರಸ್ತೆ) ಹಾಗೂ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಇನ್ನು ಬೆಳಿಗ್ಗೆಯಿಂದ ಕಾರ್ಯಕ್ರಮ ಮುಗಿಯುವವರೆಗೂ ವಾಹನಗಳನ್ನು ರಸ್ತೆ ಬದಿಯಲ್ಲಿ ಪಾರ್ಕ್ ಮಾಡುವುದನ್ನು ತಪ್ಪಿಸಲು ಸಹಕರಿಸುವಂತೆ ಮನವಿ ಮಾಡಲಾಗಿದೆ.
ಪೇಟೆಯ ಪ್ರಮುಖ ರಸ್ತೆಗಳ ಮೇಲೆ ಯಾವುದೇ ವಾಹನಗಳನ್ನು ಪಾರ್ಕ್ ಮಾಡುವುದು ಕಂಡುಬಂದರೆ, ಅವುಗಳನ್ನು ಟೋಯಿಂಗ್ ವಾಹನದ ಮೂಲಕ ತೆರವುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
Leave a Reply