“ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿ, ಕುಖ್ಯಾತ ಕಳ್ಳರ ಬಂಧನ”

ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿಯ ನಿರ್ಮಲಾ ಪಂಡಿತ್ ಮತ್ತು ಮೂಡುಮಾರ್ನಾಡು ಗ್ರಾಮದ ಪ್ರೇಮಾ ಅವರ ಕುತ್ತಿಗೆಯಿಂದ ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಯಶಸ್ವಿಯಾಗಿದೆ.

ಬಂಧಿತರನ್ನು ಮಂಗಳೂರು ಚೆಂಬುಗುಡ್ಡೆಯ ಹಬೀಬ್ ಹಸನ್ (ಹಬ್ಬಿ) ಮತ್ತು ಬಂಟ್ವಾಳ ತಾಲೂಕು ಪರ್ಲಿಯಾ ಕ್ರಾಸ್‌ರೋಡ್‌ನ ಉಮ್ಮರ್ ಸಿಯಾಫ್ (ಚಿಯಾ) ಎಂದು ಗುರುತಿಸಲಾಗಿದೆ. ಹಬ್ಬಿ ವಿರುದ್ಧ ಉಭಯ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಸುಮಾರು 44 ಪ್ರಕರಣಗಳು ದಾಖಲಾಗಿದ್ದು, ಹಲವು ವಾರಂಟ್‌ಗಳು ಜಾರಿಯಾಗಿವೆ. ಚಿಯಾ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಮೂಡುಬಿದಿರೆ ಠಾಣೆಯಲ್ಲಿ ಮಹಿಳೆಯರ ಕುತ್ತಿಗೆಯಿಂದ ಸರ ಎಗರಿಸುವ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ, ಪೊಲೀಸರು ಆರೋಪಿಗಳ ಬಗ್ಗೆ ಜಾಡು ಹಿಡಿದು ಅವರ ಮೇಲೆ ಶೋಧ ನಡೆಸಿ, ಕೊನೆಗೂ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರಿಂದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತುಗಳ ಮೌಲ್ಯ ಅಂದಾಜು 2,50,000 ರೂಪಾಯಿಗಳಾಗಿವೆ.

ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ಡಿ.ಸಿ.ಪಿ. ಸಿದ್ಧಾರ್ಥ ಗೋಯಲ್, ಎಸಿಪಿ ಶ್ರೀಕಾಂತ್ ಹಾಗೂ ಮುನ್ನುತ್ತರಾದ ಅಧಿಕಾರಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರೊಂದಿಗೆ ಎ.ಎಸ್.ಐ. ಪ್ರಶಾಂತ್, ಮೋಹನ್ ದಾಸ್ ಕೋಟ್ಯಾನ್, ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಖಿಲ್ ಅಹ್ಮದ್, ನಾಗರಾಜ್ ಮತ್ತು ವೆಂಕಟೇಶ್ ಭಾಗವಹಿಸಿದರು.

ADVRTISEMENT

Leave a Reply

Your email address will not be published. Required fields are marked *