ಮೂಡುಬಿದಿರೆ: ಯಾವುದೇ ಸ್ಪರ್ಧೆಗಳಲ್ಲಿ ಸೋಲು- ಗೆಲುವು ಇರುತ್ತದೆ. ಇದನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿಯಿಂದ ಆಟವಾಡಿ ಯಶಸ್ವಿಯಾಗಿ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹೇಳಿದರು.
ಅವರು ದ.ಕ.ಜಿ.ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು.
ರೋಟರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಾರಾಯಣ ಪಿ.ಎಂ.ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಉಪನಿರ್ದೇಶಕರಾದ ವೆಂಕಟೇಶ್ ಸುಬ್ರಾಯ ಪಟಗಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಅಧಿಕಾರಿಗಳು, ಜಿಲ್ಲಾ ದೈ.ಶಿ.ಶಿ.ಸಂಘದ ಅಧ್ಯಕ್ಷ ಭುವನೇಶ್, ರೋಟರಿ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದೈ.ಶಿ.ಶಿಕ್ಷಕ ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.

Leave a Reply