



ಮೂಡುಬಿದಿರೆ: ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ಐಕಳ ಪಂಚಾಯತ್ ವ್ಯಾಪ್ತಿಯ ದಾಮಸ್ಕಟ್ಟೆಯಿಂದ ಪಟ್ಟೆಕ್ರಾಸ್ ವರೆಗೆ ರಸ್ತೆ ಅಗಲೀಕರಣಕ್ಕೆ ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಬುಧವಾರ ಶಿಲಾನ್ಯಾಸ ನೆರವೇರಿಸಿದರು .ನಂತರ ಮಾತನಾಡಿದ ಕೋಟ್ಯಾನ್ ಅವರು ಮೂರುಕಾವೇರಿಯಿಂದ ದಾಮಸ್ಕಟ್ಟೆವರೆಗೆ ರಸ್ತೆ ಅಗಲೀಕರಣಗೊಂಡಿದ್ದು, ದಾಮಸ್ಕಟ್ಟೆಯಿಂದ ಪಟ್ಟೆ ಕ್ರಾಸ್ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿತ್ತು ಈ ಕಾರಣದಿಂದ ಈ ಹಿಂದಿನ ಸರಕಾರವಿದ್ದ ಸಂದರ್ಭ ಈ ರಸ್ತೆಗೆ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.ಗ್ರಾಮೀಣ ಭಾಗವಾದ ಈ ಪ್ರದೇಶದಲ್ಲಿ ಕಳೆದ ಸರಕಾರವಿದ್ದ […]

ಮೂಡುಬಿದಿರೆ: ತಾಲೂಕಿನ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದಲ್ಲಿ ಜನವರಿ ೨೫ರಂದು ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳ ನಡೆಯಲಿದೆ. ಈ ಬಾರಿಯ ಕಂಬಳದಲ್ಲಿ ತುಳುನಾಡಿನ ವಿವಿಧ ಕ್ಷೇತ್ರದ ಸಾಧಕರನ್ನು ರಾಜ್ಯಮಟ್ಟದ ವೀರರಾಣಿ ಅಬ್ಬಕ್ಕ ಪ್ರಶಸ್ತಿಯನ್ನು ನೀಡಿ ಗೌರವಿಸುವುದೆಂದು ತೀರ್ಮಾನಿಸಲಾಗಿದ್ದು, ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲ್ಕಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಶಾಸಕ, ಮೂಡುಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ತಿಳಿಸಿದರು.ಅವರು ಒಂಟಿಕಟ್ಟೆಯ ಸೃಷ್ಟಿ ಗಾರ್ಡನ್ ಸಭಾಭವನದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ […]

ಮೂಡುಬಿದಿರೆ : ಕನಾ೯ಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಭಾನುವಾರ ಕನ್ನಡ ಭವನದಲ್ಲಿ ನಡೆದ 37 ನೇ ವಾರ್ಷಿಕ ಸಮಾವೇಶವನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ರಾಜಕೀಯ ರಹಿತವಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ದೇಶದಲ್ಲೇ ನಂಬರ್ ವನ್ ಸಂಘಟನೆಯಾಗಿ ಯುವವಾಹಿನಿ ಘಟಕವು ಮೂಡಿ ಬರಲಿ ಎಂದು ಶುಭಹಾರೈಸಿದರು.ಹೈಕೋರ್ಟ್ ನ ನಾಮನಿರ್ದೇಶಿತ ಹಿರಿಯ ನ್ಯಾಯವಾದಿ ತಾರಾನಾಥ ಪೂಜಾರಿ ಮಾತನಾಡಿ ಅಧಿಕಾರವು […]